ಕಲಬುರಗಿ : ಬೈಕ್‌ನಲ್ಲಿ ಹೋಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ 20 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ರಾಸಣಗಿ ಕ್ರಾಸ್ ಬಳಿ ನಡೆದಿದೆ. ಭೂಮಿಕಾ ಹಂಗರಗಾ ಮೃತ ಯುವತಿಯಾಗಿದ್ದು, ಬೈಕ್ ಸವಾರ ಅಮೋಘಸಿದ್ದ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂಬದಿಯಿಂದ ಅತಿ ವೇಗವಾಗಿ ಬಂದ NEKRTC (ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ) ಬಸ್, ಬೈಕ್‌ಗೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಯುವತಿ ಭೂಮಿಕಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಅಮೋಘಸಿದ್ದ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ.
ಇದನ್ನೂ ಓದಿ : ಮಿಸ್ಟರ್ ನಾರಾಯಣಸ್ವಾಮಿ.. ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್ | ಡಿಕೆಶಿ ತಿರುಗೇಟು



















