ಬೆಂಗಳೂರು : ಕಾರು ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಲಹಂಕ ಫ್ಲೈಓವರ್ ಸಮೀಪದ ಹೆಚ್‌ಪಿ ಪೆಟ್ರೋಲ್ ಬಂಕ್ ಬಳಿ ರಾತ್ರಿ ಸುಮಾರು 11:40ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಮಾಹಿತಿ ಪ್ರಕಾರ, ಸಿಗ್ನಲ್ ಜಂಪ್ ಮಾಡಿ ಬಂದ ಕಾರು ಚಾಲಕ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಕೂಟರ್‌ನಲ್ಲಿದ್ದ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ
ಗಾಯಾಳುವನ್ನು ತಕ್ಷಣ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ವೇಳೆ ಕಾರು ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದಾನೆ ಎಂಬ ಮಾಹಿತಿ ಕೂಡ ಹೊರಬಿದ್ದಿದೆ.
ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಯಲಹಂಕ ಸಂಚಾರ ಪೊಲೀಸರು ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆ ಅಬ್ಬರ ; ಸಾಲು ಸಾಲು ಅವಾಂತರ.. ಜನ ಹೈರಾಣು!


















