ತುಮಕೂರು : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ.
ಗೊಬ್ಬರ ತುಂಬಿದ್ದ ಲಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದು ಛಿದ್ರ ಛಿದ್ರವಾಗಿದ್ದು, ಕಾರು ಚಾಲಕ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಕುಮಾರಸ್ವಾಮಿ, ಗಾಯತ್ರಿ ಸೇರಿದಂತೆ ನಾಲ್ವರು ದುರ್ಮರಣ ಹೊಂದಿದ್ದು, ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರ ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಟೀಮ್ ಇಂಡಿಯಾ ಟಿ20 ನಾಯಕತ್ವ ಬದಲು : ಸೂರ್ಯಕುಮಾರ್ ಔಟ್.. ಶ್ರೇಯಸ್ ಅಯ್ಯರ್‌ಗೆ ಪಟ್ಟ?


















