ಉಡುಪಿ | ಜಿಲ್ಲೆಯ ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಪಾದಚಾರಿಯೋರ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು (ಡಿ.29) ಬೆಳಿಗ್ಗೆ ನಡೆದಿದೆ.

ನಿಟ್ಟೆ ಗ್ರಾಮ ಪಂಚಾಯತ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ದಾವಣಗೆರೆಯಿಂದ ಮಂಗಳೂರಿಗೆ ಸಾಗತ್ತಿದ್ದ ಮೊಟ್ಟೆ ಲಾರಿ ಮತ್ತು ಬೆಳ್ಮಣ್ ಕಡೆಯಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಈ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮೇಲೆಯೇ ಲಾರಿ ಪಲ್ಟಿಯಾಗಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಲಾರಿಯ ಹಿಂದುಗಡೆ ಬರುತ್ತಿದ್ದ ಒಂದು ಕಾರು ಕೂಡ ಅಪಘಾತಕ್ಕೊಳಗಾಗಿದೆ.

ಅಪಘಾತದಲ್ಲಿ ಲಾರಿ ಮತ್ತು 2 ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ : ನಾನು ಪಿಎಂ ಆಗಬೇಕು ಎಂದು ಅರ್ಜಿ ಹಾಕಿದ್ದೇನಾ ಚರ್ಚೆ ಆಗಲಿ | ದೇವೇಗೌಡರ ಸವಾಲು



















