ಬೆಂಗಳೂರು : ನಗರದ ಯಲಹಂಕದಲ್ಲಿರುವ ಸ್ಪರ್ಶ್ ಆಸ್ಪತ್ರೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಪ್ರತ್ಯಕ್ಷದರ್ಶಿಗಳ ಮಾಹಿತಿಯ ಪ್ರಕಾರ, ಸ್ಕೂಟರ್ ಸವಾರ ಎಡಗಡೆ ತಿರುವು ಪಡೆಯುವ ವೇಳೆ ಟೆಂಪೋ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸದ್ಯಕ್ಕೆ ಅವರು ಹಾರ್ಡ್‌ವೇರ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಮಾತ್ರ ಲಭ್ಯವಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅಪಘಾತದ ನಿಖರ ಕಾರಣ ಹಾಗೂ ಮೃತರ ಗುರುತು ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ : ರೀಲ್ಸ್‌ಗಾಗಿ ಕಾಡಾನೆಗೆ ಗುದ್ದುವ ರೀತಿ ಜೀಪ್ ಡ್ರೈವ್ – ಯುವಕನ ಹುಚ್ಚಾಟಕ್ಕೆ ಭಾರೀ ಆಕ್ರೋಶ!


















