ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಬೈಕ್ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಟ್ಟು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮದುವೆಗೆಂದು ತಲಕಾಯಲಬೆಟ್ಟಕ್ಕೆ ತೆರಳುತ್ತಿದ್ದ ಬೈಕ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಬಾಲಾಜಿ, ವೆಂಕಟೇಶಪ್ಪ, ಹರೀಶ್, ಆರ್ಯ ಮೃತರು.
ಅದೃಷ್ಟವಶಾತ್, ಬೈಕ್‌ನಲ್ಲಿದ್ದ ಮತ್ತೊಂದು ಮಗು ಶಿವಾನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮದುವೆಯಲ್ಲಿ ಭಾಗಿಯಾಗಲು ಬೈಕ್‌ನಲ್ಲಿ ಇಬ್ಬರು ಪುರುಷರು ಮೂರು ಮಕ್ಕಳೊಂದಿಗೆ ತೆರಳುತ್ತಿದ್ದರು. ಈ ವೇಳೆ ಇನ್ನೊಂದೆಡೆ ಎದುರುಗಡೆ ಬಂದ ಖಾಸಗಿ ಶಾಲಾ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.