ಬಾಗಲಕೋಟೆ : ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ–ಯಡಹಳ್ಳಿ ರಸ್ತೆ ಮಧ್ಯೆ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಪಘಾತದಲ್ಲಿ ಬಾಡಗಿ ಗ್ರಾಮದ ನಿವಾಸಿ ರವಿ ಬಸಪ್ಪ ಧೂಪದ (25), ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅದೇ ಬೈಕ್‌ನಲ್ಲಿ ಇದ್ದ ಬಾಳಪ್ಪ ಮಲ್ಲಪ್ಪ ಕುಸ್ತಿ (24) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತ ಹೇಗೆ ಸಂಭವಿಸಿತು ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಘಟನೆ ಬೀಳಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ



















