ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್ ಮತ್ತು ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಲ್ಲೇಶ ಹಣಮಂತ ಲಮಾಣಿ ಮೃತ ಬೈಕ್ ಸವಾರ.
ವೇಗವಾಗಿ ಬಂದ ಬೈಕ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದೆ.
ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ರಾಮದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಶವವನ್ನು ರಾಮದುರ್ಗ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ದುರ್ಘಟನೆ ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ
ಇದನ್ನೂ ಓದಿ : ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಗುಚಿ ಓರ್ವ ಸಾವು!


















