ಹುಬ್ಬಳ್ಳಿ : ಬೈಕ್ ಮತ್ತು ಕೊರಿಯರ್ ಗೂಡ್ಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿ–ಗದಗ ಬೈಪಾಸ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯ ಜಯರಾಜನಗರ ನಿವಾಸಿಗಳಾದ ರಜನಿ ತಿಕಲಾ ಹಾಗೂ ಸುಕುಮಾರ ತಿಕಲಾ ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.
ರಜನಿ ತಿಕಲಾ ಅವರು ಶಕುಂತಲಾ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ರಜನಿಯನ್ನು ಪತಿ ಸುಕುಮಾರ ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕೊರಿಯರ್ ಗೂಡ್ಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ರಜನಿ ಹಾಗೂ ಸುಕುಮಾರ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಮಾಹಿತಿ ತಿಳಿದು ಪೂರ್ವ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!



















