ಶಿವಮೊಗ್ಗ : ನಗರದಲ್ಲಿ ಅಪ್ರಾಪ್ತ ಯುವಕನ ಮೇಲೆ ಭೀಕರ ದಾಳಿ ನಡೆದಿದ್ದು, ಘಟನೆ ಭಾರೀ ಆತಂಕ ಸೃಷ್ಟಿಸಿದೆ. ವಾದಿ-ಎ-ಹುಧಾ 3ನೇ ಕ್ರಾಸ್‌ನಲ್ಲಿ 17 ವರ್ಷದ ಬಾಲಕನ ಮೇಲೆ ದುಷ್ಕರ್ಮಿಗಳ ತಂಡ ಮಾರಣಾಂತಿಕ ದಾಳಿ ನಡೆಸಿದೆ.
ದಾಳಿಯ ವೇಳೆ ಮಾರಕಾಸ್ತ್ರ ಬಾಲಕನ ತಲೆಯಲ್ಲೇ ಸಿಲುಕಿಕೊಂಡಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ.
ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಸುತ್ತಮುತ್ತ ಸದ್ಯ ಪೊಲೀಸರು ಕಟ್ಟು ನಿಟ್ಟಿನ ಭದ್ರತೆ ಒದಗಿಸಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಕಾರದ ಪುಡಿ ಎರಚಿ, ಕತ್ತು ಸೀಳಿ, ಗುಂಡು ಹಾರಿಸಿ ವ್ಯಕ್ತಿಯ ಬರ್ಬರ ಹತ್ಯೆ



















