ಬೆಂಗಳೂರು : ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರದಲ್ಲಿ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿವೆ.
ಏಕಾಏಕಿ ಒಂದು ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅಕ್ಕಪಕ್ಕದಲ್ಲಿ ನಿಲ್ಲಿಸಿದ್ದ ಇತರೆ ಬಸ್‌ಗಳಿಗೂ ಬೆಂಕಿ ತಗುಲಿದೆ. ಪರಿಣಾಮ ನಾಲ್ಕು ಬಸ್‌ಗಳು ಧಗಧಗೆನೆ ಹೊತ್ತಿ ಉರಿದಿವೆ.
ಬೆಂಕಿ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ಬೆಂಕಿ ಅವಘಡಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಬಸ್‌ಗಳ ಮಾಲೀಕರ ವಿವರ ಕೂಡ ಇನ್ನೂ ಪತ್ತೆಯಾಗಿಲ್ಲ. ಈ ಘಟನೆ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್ ಕಿತ್ತೆಸೆದ ಕಾರ್ಯಕರ್ತರು



















