ಚಿಕ್ಕಬಳ್ಳಾಪುರ : ಭೀಕರ ಸರಣಿ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಇಂದು ನಡೆದಿದೆ. ದುರ್ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.

ಥಾರ್ ಕಾರು, ಆಟೋ ಮತ್ತು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ವೇಗವಾಗಿ ಬಂದ ಥಾರ್ ಕಾರು ತನ್ನ ಮುಂದೆ ಚಲಿಸುತ್ತಿದ್ದ ಆಟೋಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಕ್ಯಾಂಟರ್ ವಾಹನಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ. ಪರಿಣಾಮವಾಗಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಐವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಅಪಘಾತದಲ್ಲಿ ಗಾಯಗೊಂಡ ಹತ್ತಕ್ಕೂ ಹೆಚ್ಚು ಜನರನ್ನು ತಕ್ಷಣ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನ ಓದಿ : ‘ನಮ್ಮಿಂದಲೇ ನಿನ್ ಜೀವನ ನಡೆಯೋದು, ಹಿಂದಿ ಮಾತಾಡು’ – ಆಟೋ ಚಾಲಕನಿಗೆ ಮಹಿಳೆ ಧಮ್ಕಿ!



















