ಬೆಂಗಳೂರು: ಹೋಟೆಲ್ ಕಿಚನ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆಯೊಂದು ನಡೆದಿದೆ.
ಕಾಳೇನಾ ಅಗ್ರಹಾರದ ಸೂಪಿ ಮಂದಿ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ. ಬನ್ನೇರುಘಟ್ಟ ರಸ್ತೆಯ ಕಾಳೇನಾ ಅಗ್ರಹಾರ ಕಿಚನ್ ಎಕ್ಸಾಸ್ಟ್ ಪ್ಯಾನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕ್ಷಣ ಮಾತ್ರದಲ್ಲಿ ಇಡೀ ಕಿಚನ್ ಗೆ ದಟ್ಟ ಹೊಗೆ ಆವರಿಸಿದೆ. ಕೂಡಲೇ ಹೋಟೆಲ್ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಈ ವೇಳೆ ಓರ್ವ ಸಿಬ್ಬಂದಿಗೆ ಉಸಿರಾಟದ ತೊಂದರೆಯಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಹೊಟೇಲ್ ಪಕ್ಕದಲ್ಲಿಯೇ ಪೆಟ್ರೋಲ್ ಬಂಕ್ ಇತ್ತು. ಸಕಾಲಕ್ಕೆ ತೆರಳಿದ ಸಿಬ್ಬಂದಿ ಬೆಂಕಿ ನಂದಿಸಿ, ದೊಡ್ಡ ದುರಂತ ತಪ್ಪಿಸಿದ್ದಾರೆ.