ಕೊಪ್ಪಳ: ಮನೆಯ ಬೀಗ ಮುರಿದು 1.35 ಲಕ್ಷ ನಗದು ಹಾಗೂ ಬೆಳ್ಳಿ ಸಾಮಾನುಗಳನ್ನು ಕಳ್ಳತನ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.
ಶ್ರೀಕಾಂತ ಕುಲಕರ್ಣಿ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳ್ಳತನವಾಗಿದ್ದು, ಮನೆಯವರು ಕಾಶಿ ಯಾತ್ರೆಗೆ ಹೋಗಿರುವುದನ್ನು ಖಚಿತಪಡಿಸಿಕೊಂಡ ಖದೀಮರು ಕೈಚಳಕ ತೋರಿಸಿದ್ದಾರೆ.
ಕಳ್ಳರು ಮನೆಯೊಳಗೆ ಬಂದು ಹೋಗಿರುವ ದೃಶ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸರೆಯಾಗಿದ್ದು, ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.