ರಾಮನಗರ | ಗೃಹಿಣಿಯೊಬ್ಬರು ಸ್ವಿಮ್ಮಿಂಗ್ ಫೂಲ್‌ನಲ್ಲಿ ಮುಳುಗಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಕನಕಪುರದ ಬೆಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಪ್ರತಿಭಾ (32) ಮೃತ ಗೃಹಣಿ.
ಇನ್ನು, ಸ್ಥಳಕ್ಕೆ ಕೋಡಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ವೇಳೆ ಅನುಮಾನಸ್ಪದ ಸಾವು ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಮೃತ ಪ್ರತಿಭಾ ಪತಿ ನಂಜೇಗೌಡ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರತಿಭಾ ಕುಟುಂಬಸ್ಥರ ದೂರಿನ ಮೇಲೆ ಪ್ರಕರಣ ದಾಖಲಾಗಿದೆ. ಸದ್ಯ ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಲೀಸ್‌ಗೆ ಮನೆ ಕೊಡಿಸುವುದಾಗಿ ಹೇಳಿ ಮಹಿಳೆಗೆ 5 ಲಕ್ಷ ವಂಚನೆ | ಆರೋಪಿ ವಿರುದ್ದ FIR ದಾಖಲು



















