ಬೆಂಗಳೂರು | ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಅನುಮಾನಾಸ್ಪದವಾಗಿ ಪತ್ತೆಯಾದ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
27 ವರ್ಷದ ಸುಪ್ರಿತಾ ಮೃತರು. ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡುಬಂದಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಣ್ಣೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳ ಹಿಂದೆ ಕಿರಣ್ ಕುಮಾರ್ ಎಂಬವರೊಂದಿಗೆ ಸುಪ್ರಿತಾ ವಿವಾಹವಾಗಿತ್ತು. ಕಿರಣ್ ಖಾಸಗಿ ಸಂಸ್ಥೆಯೊಂದರ ಸೇಲ್ಸ್ ಟೀಂನಲ್ಲಿ ಕೆಲಸ ಮಾಡುತ್ತಿದ್ದರೆ, ಸುಪ್ರಿತಾ ಗೃಹಿಣಿಯಾಗಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಇದನ್ನೂ ಓದಿ : ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ಕ್ಕೆ ಬೃಹತ್ ಪ್ರತಿಭಟನೆಗೆ ಕರೆ



















