ರಾಕಿಂಗ್ ಸ್ಟಾರ್ ಯಶ್ ರಾಮಾಯಣ ಭಾಗ 1 ಸಿಕ್ಕಾಪಟ್ಟೆ ಹೈಪ್ ಕ್ರೀಯೇಟ್ ಮಾಡುತ್ತಿದೆ. ಯಶ್ ಅಭಿಮಾನಿಗಳು ಸಿನಿಮಾಗಾಗಿ ಕಾತುರತೆಯಿಂದ ಕಾಯುತ್ತಿದ್ದಾರೆ.
ನಿರ್ದೇಶಕ ನಿತೇಶ್ ತಿವಾರಿ ಅವರ ಹಿಂದೂ ಮಹಾಕಾವ್ಯದ ರೂಪಾಂತರದಲ್ಲಿ ರಣಬೀರ್ ಕಪೂರ್ ಭಗವಾನ್ ರಾಮನಾಗಿ, ಸಾಯಿ ಪಲ್ಲವಿ ಸೀತಾ ದೇವತೆಯಾಗಿ, ರವಿ ದುಬೆ ಲಕ್ಷ್ಮಣನಾಗಿ ಮತ್ತು ಯಶ್ ರಾವಣನಾಗಿ ನಟಿಸಿದ್ದಾರೆ. ಇದೀಗ ಈ ಬಿಗ್ ಬಜೆಟ್ ಸಿನಿಮಾ ಬಹುನಿರೀಕ್ಷೆ ಹುಟ್ಟಿಸಿದ್ದು ರಾಮಾಯಣ ಗ್ಲಿಂಪ್ಸ್ ಜನರ ಮೆಚ್ಚುಗೆ ಗಳಿಸಿದೆ.
ಪ್ರೈಮ್ ಫೋಕಸ್ ಸ್ಟುಡಿಯೋಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಿಸಿದ ರಾಮಾಯಣ ಭಾಗ 1 2026 ರ ದೀಪಾವಳಿಯಲ್ಲಿ ಬಿಡುಗಡೆಯಾಗಲಿದ್ದು, ಎರಡನೇ ಭಾಗವು 2027 ರ ದೀಪಾವಳಿಯಲ್ಲಿ ದೊಡ್ಡ ಪರದೆಯ ಮೇಲೆ ಬರಲಿದೆ. ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾದ ನಂತರ ಯಶ್ ಅಭಿಮಾನಿಗಳು ಹೊಸ ಮಾಹಿತಿಗಾಗಿ ಕಾಯುತ್ತಿದ್ದರು. ಈಗ ಅವರಿಗೆ ಗುಡ್ ನ್ಯೂಸ್ ಸಿಕ್ಕಿದೆ.