ನಟ ದರ್ಶನ್ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಈಗ ಜಾಮೀನು ಪಡೆದು ಎರಡು ವಾರ ಕಳೆಯುತ್ತಿದೆ. ಈಗ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಆಪರೇಷನ್ ಅಗತ್ಯವಿದೆ ಎಂದು ಅವರ ಪರ ವಕೀಲರು ವಾದಿಸಿದ್ದರು. ಆದರೆ, ಇಲ್ಲಿಯವೆರೆಗೆ ದರ್ಶನ್ ಆಪರೇಷನ್ ಮಾಡಿಸಿಕೊಂಡಿಲ್ಲ.
ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾಗ ತೀವ್ರ ಬೆನ್ನು ನೋವಿನಿಂದ ಬಳಲಿದ್ದರು. ಹೀಗಾಗಿ ಚಿಕಿತ್ಸೆ ನೀಡಿದ್ದ ಬಳ್ಳಾರಿಯ ವಿಮ್ಸ್ ಆಸ್ಪತ್ರೆ ವೈದ್ಯರು, ದರ್ಶನ್‌ಗೆ ಅಪರೇಷನ್ ಅವಶ್ಯಕತೆ ಎಂದು ವರದಿ ನೀಡಿದ್ದರು. ಈ ವರದಿಯನ್ನೇ ಆಧರಿಸಿ ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು. ದರ್ಶನ್ಗೆ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಬೇಕು ಎಂದಿದ್ದರು. ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ದರ್ಶನ್ ಮಾತ್ರ ಇಲ್ಲಿಯವರೆಗೆ ಆಪರೇಷನ್ ಮಾಡಿಸಿಕೊಂಡಿಲ್ಲ.
ಆದರೆ, ಆಸ್ಪತ್ರೆಯಲ್ಲಿ ದರ್ಶನ್‌ಗೆ ಚಿಕಿತ್ಸೆ ಮುಂದುವರಿದಿದೆ. ದರ್ಶನ್ ಫಿಸಿಯೋ ಥೆರೆಪಿ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಸ್ಕ್ಯಾನ್ ಕೂಡ ಮಾಡಿಸಿದ್ದಾರೆ. ದರ್ಶನ್ ಗೆ 6 ವಾರಗಳ ಜಾಮೀನು ಸಿಕ್ಕಿದೆ. ಆದರೆ, ಈಗಾಗಲೇ ಎರಡು ವಾರ ಮುಗಿಯುತ್ತಿವೆ. ಕೊನೆಯ ಹಂತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ವಿಶ್ರಾಂತಿಗಾಗಿ ದರ್ಶನ್ ಕೋರ್ಟ್ ಬಳಿ ಮತ್ತಷ್ಟು ಸಮಯಾವಕಾಶ ಕೇಳುವ ಸಾಧ್ಯತೆ ಇರುತ್ತದೆ. ಆದರೆ, ದರ್ಶನ್ ಗೆ ಆಪರೇಷನ್ ಇಷ್ಟ ಇಲ್ಲ ಎನ್ನಲಾಗುತ್ತಿದೆ. ಯಾವ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಅವರು ಈ ರೀತಿ ಮಾಡುತ್ತಿದ್ದಾರೆ ಎಂಬುವುದು ಮಾತ್ರ ಗೊತ್ತಾಗಿಲ್ಲ.