ಭೋಪಾಲ್: 8 ವರ್ಷದ ಬಾಲಕಿ ಮೇಲೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ (MadhyaPradesh) ಭೀಂಡ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ನೆರೆಯ ಮನೆಯಲ್ಲೇ ಆತ ವಾಸಿಸುತ್ತಿದ್ದ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆಯ ಆರೋಗ್ಯ ಸ್ಥಿರವಾಗಿದ್ದು, ಆಕೆ ಪೋಷಕರೊಂದಿಗೆ ಮನೆಯಲ್ಲಿದ್ದಾಳೆ ಎಂದು ಪೊಲೀಸ್ ಅಧಿಕಾರಿ ಮುಖೇಶ್ ಕುಮಾರ್ ಶಕ್ಯಾ ಹೇಳಿದ್ದಾರೆ.
ಆರೋಪಿಯು ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವೇಳೆ ಆಕೆ ಜೋರಾಗಿ ಕಿರುಚಿಕೊಂಡಿದ್ದಾಳೆ. ಸಾರ್ವಜನಿಕರು ಆರೋಪಿಯಿಂದ ಸಂತ್ರಸ್ತೆಯನ್ನು ರಕ್ಷಿಸಿ, ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಮೂಲಗಳು ಹೇಳಿವೆ. ಸದ್ಯ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.



















