ಸೂಪರ್ ಸ್ಟಾರ್ ಉಪೇಂದ್ರ (Upendra) ನಟಿಸಿ, ನಿರ್ದೇಶಿಸಿರುವ ಯುಐ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರೀ ಸದ್ದು ಮಾಡಿತ್ತು. ಇಂದು ತೆರೆಗೆ ಅಪ್ಪಳಿಸಿರುವ ಚಿತ್ರ ಭರ್ಜರಿ ಕಲೆಕ್ಷನ್ ಮಾಡಿದೆ.
ಬಿಡುಗಡೆಯಾದ ಮೊದಲ ದಿನವೇ ರಾಜ್ಯದಲ್ಲಿ ಯುಐ ಸಿನಿಮಾ 10 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ನಿರ್ಮಿಸಿದೆ. ಉಪೇಂದ್ರ ನಟನೆಯ ಬಹುನಿರೀಕ್ಷಿತ ಸಿನಿಮಾ UI ಬಹುಭಾಷೆಗಳಲ್ಲಿ ಬಿಡುಗಡೆಯಾಗಿದೆ. ಮೊದಲ ದಿನವೇ ಕರ್ನಾಟಕದಲ್ಲಿ 10 ಕೋಟಿ ರೂ. ಕಲೆಕ್ಷನ್ ಮಾಡಿದೆ. ಆಂಧ್ರ ಪ್ರದೇಶ, ತೆಲಂಗಾಣದಲ್ಲೂ ಹೌಸ್‌ಫುಲ್ ಪ್ರದರ್ಶನ ಕಂಡಿದೆ. ಚಿತ್ರ ನೋಡಿದ ಅಭಿಮಾನಿಗಳು ಮೆಚ್ಚುಗೆಯ ಮಾತುಗಳನ್ನು ಹೇಳುತ್ತಿದ್ದಾರೆ.
UI ಸಿನಿಮಾದ ಮೂಲಕವೂ ಉಪ್ಪಿ ಮತ್ತೆ ತಲೆಗೆ ಹುಳು ಬಿಟ್ಟಿದ್ದಾರೆ. ಚಿತ್ರದ ಕಥೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ‘ಕಾಯಕವೇ ಕೈಲಾಸ, ಕೆಲಸ ಮಾಡಿ ಅಂತ ಹೇಳಿದ್ದಾರೆ. ಜೀವನದ ಬಗ್ಗೆ ಫೋಕಸ್ ಮಾಡಿ ಎನ್ನುವ ಸಂದೇಶವನ್ನು ಈ ಚಿತ್ರದ ಮೂಲಕ ಉಪೇಂದ್ರ ನೀಡಿದ್ದಾರೆ. ಅಭಿಮಾನಿಗಳು ಈ ಚಿತ್ರಕ್ಕೆ ಮೆಚ್ಚುಗೆಯ ಮಾತುಗಳನ್ನು ಹೇಳಿದ್ದಾರೆ.
2040 ಭವಿಷ್ಯದ ಅಸಲಿ ಕಥೆಯೊಂದಿಗೆ ಯುಐ ಸಿನಿಮಾ ಮೂಲಕ ಉಪೇಂದ್ರ ಅಬ್ಬರಿಸಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ (Reeshma Nanaiah) ಜೊತೆಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮನೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಈ ಚಿತ್ರ ನಿರ್ಮಿಸಿದ್ದಾರೆ.