ಬೆಂಗಳೂರು: ನೀವು ಈಗಷ್ಟೇ ಮದುವೆಯಾಗಿದ್ದರೆ, ಮದುವೆ, ಮಕ್ಕಳಾಗಿ ಪ್ರತ್ಯೇಕ ಕುಟುಂಬ ಹೊಂದಿದ್ದರೆ, ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ಹೌದು, ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ವಿತರಿಸಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಿದೆ. 2026ರ ಮಾರ್ಚ್ ವರೆಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ಹೇಗೆ ಸಲ್ಲಿಸಬಹುದು ಎಂಬುದರ ಮಾಹಿತಿ ಇಲ್ಲಿದೆ.
ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್, ಆದಾಯ ಪ್ರಮಾಣಪತ್ರ, 6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಜನನ ಪ್ರಮಾಣಪತ್ರ, ಪಾಸ್ ಪೋರ್ಟ್ ಸೈಜಿನ ಫೋಟೊಗಳನ್ನು ನೀಡಿ ಹೊಸ ಕಾರ್ಡಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರ ಇಲಾಖೆ ವೆಬ್ ಸೈಟ್ https://ahara.karnataka.gov.in ಗೆ ಭೇಟಿ ನೀಡಬೇಕು.
- New Ration Card Application ಆಪ್ಶನ್ ಮೇಲೆ ಕ್ಲಿಕ್ ಮಾಡಬೇಕು
- ಕುಟುಂಬದ ಎಲ್ಲ ಸದಸ್ಯರ ವಿವರ, ಆದಾಯ, ಜಮೀನು ಸೇರಿ ಅಗತ್ಯ ಮಾಹಿತಿ ಒದಗಿಸಬೇಕು.
- ಸ್ಕ್ಯಾನ್ ಮಾಡಿದ ಎಲ್ಲ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು.
- ಆನ್ ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ, ರಶೀದಿ ನಂಬರ್ ಬರೆದಿಟ್ಟುಕೊಳ್ಳಬೇಕು
ಆಫ್ ಲೈನ್ ಮೂಲಕವೂ ಅರ್ಜಿ ಸಲ್ಲಿಸಿ
ನಿಮ್ಮ ಹತ್ತರಿದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕವೂ ಅರ್ಜಿ ಸಲ್ಲಿಸಬಹುದು. ಅಲ್ಲಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಪ್ರಸಾರ ಭಾರತಿಯಲ್ಲಿ 29 ಹುದ್ದೆ: ಬೆಂಗಳೂರಿನಲ್ಲೂ ಇದೆ ಕೆಲಸ



















