ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾಗಲಿದ್ದು, ವಿದ್ಯಾರ್ಥಿಗಳು ಹಾಗೂ ಪಾಲಕರ ಎದೆ ಬಡಿದುಕೊಳ್ಳುತ್ತಿದೆ.
2025 ನೇ ಸಾಲಿನ ದ್ವಿತೀಯ ಪಿಯುಸಿ (PUC Exam) ಪರೀಕ್ಷೆಯ ಫಲಿತಾಂಶವು ಮಧ್ಯಾಹ್ನ 12.30ಕ್ಕೆ ಬಿಡುಗಡೆಯಾಗಲಿದೆ. ಅಲ್ಲದೇ, ಮಧ್ಯಾಹ್ನ 1.30ಕ್ಕೆ ವೆಬ್ ಸೈಟ್ ನಲ್ಲಿ ಫಲಿತಾಂಶ ಪರಿಶೀಲಿಸಬಹುದು.
ಮಧ್ಯಾಹ್ನ 12:30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಸ ಪ್ರಕಟಿಸಲಿದ್ದಾರೆ. ನಂತರ 1:30 ಗಂಟೆಗೆ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ ಮಾರ್ಚ್ 20ರ ವರೆಗೆ ನಡೆದಿದ್ದವು. ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಫಲಿತಾಂಶ ಚೆಕ್ ಮಾಡೋದು ಹೇಗೆ?
ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ.
ಮುಖಪುಟದಲ್ಲಿ ಕಾಣುವ ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2025 ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟ್ರೀಮ್ ಆಯ್ಕೆಮಾಡುವುದರೊಂದಿಗೆ ನೋಂದಣಿ ಸಂಖ್ಯೆ ಸಲ್ಲಿಸಿ
2 ನೇ ಪಿಯುಸಿ ಫಲಿತಾಂಶ 2025 ಪರದೆಯ ಮೇಲೆ ಕಾಣಿಸುತ್ತದೆ