ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ನಲ್ಲಿ (HPCL Recruitment 2025) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕದ ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ. HPCLನಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 14
ವಿದ್ಯಾರ್ಹತೆ ಏನು?
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಎಸ್ಸಿ, ಬಿ.ಇ, ಬಿ.ಟೆಕ್, ಎಂಎಸ್ಸಿ, ಎಂಇ, ಎಂ.ಟೆಕ್ ಕೋರ್ಟ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 28 ವರ್ಷದೊಳಗಿನವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ ಎಷ್ಟು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಬೆಂಗಳೂರಿನ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 40-50 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ. ಆಗಸ್ಟ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು hindustanpetroleum.com ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.