ಚಿತ್ರದುರ್ಗ: ನಿಧಿ ಆಸೆಗಾಗಿ ಬರ್ಬರ ಹತ್ಯೆ ನಡೆದಿರುವ ಘಟನೆ ನಡೆದಿದೆ.
ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆಯ ಪರಶುರಾಂಪುರ ಎಂಬಲ್ಲಿ ಈ ಘಟನೆ ನಡೆದಿದೆ. ಪ್ರಭಾಕರ್ (52) ಕೊಲೆಯಾಗಿರುವ ವ್ಯಕ್ತಿ. ಪರಶುರಾಂಪುರದ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆನಂದ ರೆಡ್ಡಿ (52) ಕೊಲೆ ಮಾಡಿರುವ ಆರೋಪಿ ಎನ್ನಲಾಗಿದೆ.
ಕೊಲೆ ಮಾಡಿರುವ ವ್ಯಕ್ತಿ ಕುಂದುರ್ಪಿಯಲ್ಲಿ ಬಾರ್ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದ. ಆನಂದ ರೆಡ್ಡಿಗೆ ಪಾವಗಡದ (Pavagada) ಜ್ಯೋತಿಷಿ ರಾಮಕೃಷ್ಣ, ಪಶ್ಚಿಮ ದಿಕ್ಕಿನಲ್ಲಿ ನರಬಲಿ ಕೊಟ್ಟರೆ ಚಿನ್ನ ಸಿಗಲಿದೆ ಎಂದು ಹೇಳಿದ್ದ ಎಂದು ತಿಳಿದು ಬಂದಿದೆ.
ಹೀಗಾಗಿ ನಿಧಿಯ ಆಸೆಗಾಗಿ ಆರೋಪಿಯು ಕರ್ನಾಟಕ ರಾಜ್ಯಕ್ಕೆ ಬಂದಿದ್ದ ಎನ್ನಲಾಗಿದೆ. ಪ್ರಭಾಕರ್‌ಗೆ ಲಿಫ್ಟ್ ಕೊಡುವ ನೆಪದಲ್ಲಿ ಕರೆದೊಯ್ದು ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹಾಗೂ ಜ್ಯೋತಿಷಿಯನ್ನು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.