ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ವಿಷಯ ತಡವಾಗಿ ಬೆಳಕಿಗೆ ಬಂದಿದೆ.
ಫೆ. 8ರಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. [email protected] ಎನ್ನುವ ಐಡಿಯಿಂದ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿಗೆ ಪತ್ರ ಬರೆದಿದ್ದೇನೆ. ಆ ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಲಾಗಿದೆ.
ಬೆಂಗಳೂರು, ಚೆನ್ನೈ, ಕೇರಳದಿಂದ ಬರುವ ಫ್ಲೈಟ್ಗಳ ಮೇಲೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ಏರ್ಪೋರ್ಟ್ಗೆ ಭದ್ರತೆ ಹೆಚ್ಚಿಸಿ ತನಿಖೆ ಕೈಗೊಂಡಿದ್ದಾರೆ.