ಬೆಂಗಳೂರು: ನಟಿ ಸಂಜನಾಗೆ ಸಿಸಿಬಿ ಪೊಲೀಸರು ಶಾಕ್ ನೀಡಿದ್ದು, ರದ್ದುಗೊಂಡಿದ್ದ ಪ್ರಕರಣಕ್ಕೆ ಜೀವ ತುಂಬಲು ಮುಂದಾಗಿದ್ದಾರೆ.
ನಟಿ ಸಂಜನಾ ಇತ್ತೀಚೆಗೆ ಮಾದಕ ವಸ್ತು ಪ್ರಕರಣದಲ್ಲಿ ಜೈಲು ಪಾಲಾಗಿ ಹೊರ ಬಂದಿದ್ದರು. ಈಗ ಅದೇ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ನಿರ್ಧರಿಸಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಇತ್ತೀಚಿಗೆ ಸಂಜನಾ ಗಲ್ರಾನಿ ವಿರುದ್ಧದ ಮಾದಕ ವಸ್ತು ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಈಗ ಇದನ್ನು ಪ್ರಶ್ನಿಸಲು ಮುಂದಾಗಿರುವ ಸಿಸಿಬಿ ಪೊಲೀಸರು ಗೃಹ ಇಲಾಖೆಗೆ ಮನವಿ ಮಾಡಿದ್ದಾರೆ. ಸದ್ಯದಲ್ಲೇ ಗೃಹ ಇಲಾಖೆಯಿಂದ ಸಿಸಿಬಿ ಪೊಲೀಸರಿಗೆ ಅನುಮತಿ ಸಿಗುವ ಸಾಧ್ಯತೆ ಕೂಡ ಇದೆ. ಇದು ಸಂಜನಾ ಆತಂಕಕ್ಕೆ ಕಾರಣವಾಗುತ್ತಿದೆ.