ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಅವರನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೇಶ್ವಾಪುರ ಠಾಣೆಯ ಇನ್ಸ್ಪೆಕ್ಟರ್ ಎಸ್.ಕೆ ಹಟ್ಟಿ ಅವರನ್ನ ವರ್ಗಾವಣೆ ಮಾಡಲಾಗಿದೆ. ಕೇಶ್ವಾಪುರ ಠಾಣೆಯಿಂದ ಇನ್ಸ್ಪೆಕ್ಟರ್ ಎಸ್.ಕೆ ಹಟ್ಟಿ ಅವರನ್ನ ಕಮಿಷನರ್ ಕಚೇರಿಗೆ ವರ್ಗಾವಣೆ ಮಾಡಿ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಸದ್ಯ ಘಂಟಿಕೇರಿ ಠಾಣೆಯ ಇನ್ಸ್ಪೆಕ್ಟರ್ ಜಾದವ್‌ಗೆ ಕೇಶ್ವಾಪುರ ಠಾಣೆ ಹೆಚ್ಚುವರಿ ಪ್ರಭಾರಿಯಾಗಿ ಜವಾಬ್ದಾರಿ ನೀಡಲಾಗಿದೆ.
ವಿವಸ್ತ್ರಗೊಳಿಸಿ ಬಿಜೆಪಿ ಕಾರ್ಯಕರ್ತೆ ಬಂಧನಕ್ಕೆ ದೇಶವ್ಯಾಪ್ತಿ ಅಸಮಾಧಾನ ವ್ಯಕ್ತವಾಗಿತ್ತು. ಬಿಜೆಪಿ ಠಾಣೆಗೆ ಮುತ್ತಿಗೆ ಹಾಕಿ ಹೋರಾಟ ನಡೆಸಿತ್ತು. ಇಷ್ಟಾದರೂ ತಮ್ಮ ಸಿಬ್ಬಂದಿಯನ್ನ ಸಮರ್ಥನೆ ಮಾಡಿಕೊಂಡಿದ್ದ ಕಮಿಷನರ್ ಎನ್ ಶಶಿಕುಮಾರ್, ಇದೀಗ ವರ್ಗಾವಣೆ ಕ್ರಮ ಕೈಗೊಂಡಿದ್ದಾರೆ.
ಸದ್ಯ ಪ್ರಕರಣ ತನಿಖೆ ನಡೆಸಲು ವಿಶೇಷ ತಂಡ ರಚನೆ ಮಾಡಿರುವ ಕಮಿಷನರ್, ಪ್ರಕರಣ ತನಿಖೆ ಮಾಡಿ, ಸತ್ಯಾಸತ್ಯತೆ ವಿಚಾರಣೆ ಮಾಡಿ, ವರದಿ ನೀಡುವಂತೆ ಎಸಿಪಿ ನೇತೃತ್ವ ತಂಡಕ್ಕೆ ಜವಾಬ್ದಾರಿ ನೀಡಿದ್ದಾರೆ. ಸಿಇಎನ್ ವಿಭಾಗದ ಎಸಿಪಿ ಶಿವರಾಜ್ ಕಟಕಬಾವಿ ನೇತೃತ್ವದಲ್ಲಿ ವಿಶೇಷ ತಂಡ ತನಿಖೆ ಆರಂಭಿಸಿದೆ.
ಇದನ್ನೂ ಓದಿ : ಆಸ್ಕರ್ ಅಂಗಳಕ್ಕೆ ಲಗ್ಗೆಯಿಟ್ಟ ‘ಕಾಂತಾರ:ಚಾಪ್ಟರ್ 1’



















