ಹುಬ್ಬಳ್ಳಿ: ನಗರದಲ್ಲಿ ನಡೆದ ಅತ್ಯಾಚಾರ ಹಾಗೂ ಕೊಲೆ ಆರೋಪಿ ಎನ್ ಕೌಂಟರ್ ಪ್ರಕರಣಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಎಂಟ್ರಿ ಕೊಟ್ಟಿದೆ.
ಮಾಧ್ಯಮಗಳಲ್ಲಿ ಬಂದ ವರದಿಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ದೂರು ದಾಖಲಿಸಿಕೊಳ್ಳಲಾಗಿದೆ.
ಐದು ವರ್ಷದ ಬಾಲಕಿ ಮೇಲೆ ರಿತೇಶಕುಮಾರ್ ಎಂಬ ಆರೋಪಿ ರೇಪ್ ಆಂಡ್ ಮರ್ಡರ್ ಮಾಡಿದ್ದ. ಈ ಆರೋಪಿಯನ್ನು ಪೋಲೀಸರು ಎನ್ಕೌಂಟರ್ ಮಾಡಿದ್ದರು. ಈ ಇಬ್ಬರ ಪ್ರಕರಣದಲ್ಲೂ ಮಾನವ ಹಕ್ಕು ಉಲ್ಲಂಘನೆ ಆರೋಪ ಕೇಳಿ ಬಂದ ನಂತರ ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್ ನೀಡಿ ವಿವರವಾದ ವರದಿಯನ್ನು ನಾಲ್ಕು ವಾರಗಳೊಳಗೆ ಕೊಡುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಈಗ ಮಾನವ ಹಕ್ಕುಗಳ ಆಯೋಗ ತನಿಖೆ ನಡೆಸುತ್ತಿದೆ.