ಗದಗ: ಗದಗ ಜಿಲ್ಲೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ತುಂಗಭದ್ರಾ ನದಿಗೆ ಅಪಾರ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಶಿಂಗಟಾಲೂರು ಬ್ಯಾರೇಜ್ ನಿಂದ 1 ಲಕ್ಷ 45 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ ಉಂಟಾಗಿದೆ. ಜನ, ಜಾನುವಾರು ನದಿ ಕಡೆಗೆ ಹೋಗದಂತೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ.