ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸಿಎಸ್‌ಕೆಗೆ ಆರಂಭದಲ್ಲೇ ಆಘಾತ | 14 ಕೋಟಿಯ ಆಟಗಾರ ಪ್ರಶಾಂತ್ ವೀರ್‌ಗೆ ಗಾಯ.. ಐಪಿಎಲ್‌ನಿಂದ ಹೊರಬೀಳುವ ಭೀತಿ!

January 25, 2026
Share on WhatsappShare on FacebookShare on Twitter

ಚೆನ್ನೈ : ಐಪಿಎಲ್ 2026ರ ಹರಾಜಿನಲ್ಲಿ ಭಾರಿ ಸಂಚಲನ ಮೂಡಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಕ್ಕೆ ಟೂರ್ನಿ ಆರಂಭಕ್ಕೂ ಮುನ್ನವೇ ಭಾರಿ ಹೊಡೆತ ಬಿದ್ದಿದೆ. ಬರೋಬ್ಬರಿ 14.20 ಕೋಟಿ ರೂಪಾಯಿಗಳ ಬೃಹತ್ ಮೊತ್ತ ನೀಡಿ ತಂಡಕ್ಕೆ ಸೇರಿಸಿಕೊಂಡಿದ್ದ ಯುವ ಆಲ್‌ರೌಂಡರ್ ಪ್ರಶಾಂತ್ ವೀರ್ ಭುಜದ ಗಾಯಕ್ಕೆ ತುತ್ತಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಅವರು ಆಡುವುದು ಅನುಮಾನ ಎನ್ನಲಾಗುತ್ತಿದೆ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವರ್ಗಾವಣೆಯಾದ ಸ್ಟಾರ್ ಆಟಗಾರ ರವೀಂದ್ರ ಜಡೇಜಾ ಅವರ ಸ್ಥಾನವನ್ನು ತುಂಬಬಲ್ಲ ಸಮರ್ಥ ಆಟಗಾರ ಎಂದು ಸಿಎಸ್‌ಕೆ ಮ್ಯಾನೇಜ್‌ಮೆಂಟ್ ವೀರ್ ಮೇಲೆ ಕೋಟಿ ಕೋಟಿ ಹಣ ಸುರಿದಿತ್ತು. ಆದರೆ ಇದೀಗ ಋತು ಆರಂಭಕ್ಕೂ ಮುನ್ನವೇ ಈ ಯುವ ಪ್ರತಿಭೆ ಗಾಯದ ಸಮಸ್ಯೆಗೆ ಸಿಲುಕಿರುವುದು ತಂಡದ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದೆ.

ಬದಲಿ ಆಟಗಾರನ ಬಳಕೆ

ಜಾರ್ಖಂಡ್ ವಿರುದ್ಧ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಉತ್ತರ ಪ್ರದೇಶ ತಂಡವನ್ನು ಪ್ರತಿನಿಧಿಸುತ್ತಿದ್ದ ಪ್ರಶಾಂತ್ ವೀರ್, ಫೀಲ್ಡಿಂಗ್ ಮಾಡುವಾಗ ಭೀಕರವಾಗಿ ಭುಜದ ಗಾಯಕ್ಕೆ ಒಳಗಾಗಿದ್ದಾರೆ. ಗಾಯದ ತೀವ್ರತೆ ಎಷ್ಟಿತ್ತೆಂದರೆ, ಬಿಸಿಸಿಐನ ಹೊಸ ನಿಯಮದ ಪ್ರಕಾರ ಪಂದ್ಯದ ಮಧ್ಯದಲ್ಲೇ ಅವರಿಗೆ ಬದಲಿಯಾಗಿ ಶಿವಂ ಶರ್ಮಾ ಅವರನ್ನು ಆಡುವ ಹನ್ನೊಂದರ ಬಳಗಕ್ಕೆ ಸೇರಿಸಿಕೊಳ್ಳಲಾಯಿತು. ವೈದ್ಯಕೀಯ ವರದಿಗಳ ಪ್ರಕಾರ ಅವರು ಕನಿಷ್ಠ ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯಬೇಕಿದೆ. ಆದರೆ ಐಪಿಎಲ್‌ನಂತಹ ಸುದೀರ್ಘ ಟೂರ್ನಿಯಲ್ಲಿ ಪೂರ್ಣ ಫಿಟ್‌ನೆಸ್ ಇಲ್ಲದೆ ಆಡುವುದು ಕಷ್ಟಕರವಾಗಿರುವುದರಿಂದ, ಅವರು ಸರಣಿಯಿಂದಲೇ ಹೊರಬೀಳುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.

ದೇಶೀಯ ಕ್ರಿಕೆಟ್‌ನಲ್ಲಿ ಅಸಾಧಾರಣ ಪ್ರತಿಭೆಯಾಗಿ ಮೂಡಿಬಂದಿದ್ದ ಪ್ರಶಾಂತ್ ವೀರ್, ಯುಪಿ ಟಿ20 ಲೀಗ್‌ನಲ್ಲಿ ನೋಯ್ಡಾ ಸೂಪರ್ ಕಿಂಗ್ಸ್ ಪರ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಿಂಚಿದ್ದರು. 2025ರ ಋತುವಿನಲ್ಲಿ 155ರ ಸ್ಟ್ರೈಕ್ ರೇಟ್‌ನಲ್ಲಿ 320 ರನ್ ಗಳಿಸಿ ಎಲ್ಲರ ಗಮನ ಸೆಳೆದಿದ್ದ ಈ ಯುವಕ, ಅಂಡರ್-23 ಹಂತದಲ್ಲೂ ಏಳು ಪಂದ್ಯಗಳಿಂದ 18 ವಿಕೆಟ್ ಕಬಳಿಸಿ ಭರವಸೆ ಮೂಡಿಸಿದ್ದರು. ಅನ್‌ಕ್ಯಾಪ್ಡ್ ಆಟಗಾರನೊಬ್ಬ ಐಪಿಎಲ್ ಹರಾಜಿನಲ್ಲಿ ಇಷ್ಟೊಂದು ದೊಡ್ಡ ಮೊತ್ತ ಪಡೆದಿದ್ದೇ ಒಂದು ದಾಖಲೆಯಾಗಿತ್ತು. ಕಾರ್ತಿಕ್ ಶರ್ಮಾ ಅವರೊಂದಿಗೆ ಜಂಟಿಯಾಗಿ ಅತಿ ಹೆಚ್ಚು ಸಂಭಾವನೆ ಪಡೆದ ಅನ್‌ಕ್ಯಾಪ್ಡ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವೀರ್‌ ಮೇಲೆ ಚೆನ್ನೈ ತಂಡ ಅಪಾರ ಭರವಸೆ ಇಟ್ಟುಕೊಂಡಿತ್ತು.

ಪ್ರಶಾಂತ್ ವೀರ್ ಅಲಭ್ಯರಾದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಸವಾಲಾಗಲಿದೆ. ಜಡೇಜಾ ಅವರ ನಿರ್ಗಮನದ ನಂತರ ತೆರವಾಗಿದ್ದ ಆಲ್‌ರೌಂಡರ್ ಸ್ಥಾನಕ್ಕೆ ವೀರ್ ಅವರನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳಲು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡ ಯೋಜಿಸಿತ್ತು. ಇದೀಗ ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಪ್ರಶಾಂತ್ ಅವರ ಚೇತರಿಕೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಗಾಯ ಗಂಭೀರವಾಗಿದ್ದರೆ ಅವರಿಗೆ ಬದಲಿಯಾಗಿ ಯಾವ ಆಟಗಾರನನ್ನು ಆಯ್ಕೆ ಮಾಡಬೇಕು ಎಂಬ ಆಲೋಚನೆಯಲ್ಲಿದೆ. ಒಂದು ವೇಳೆ ವೀರ್ ಐಪಿಎಲ್‌ನಿಂದ ಹೊರಗುಳಿದರೆ, ಇದು ಕೇವಲ ಚೆನ್ನೈ ತಂಡಕ್ಕೆ ಮಾತ್ರವಲ್ಲದೆ, ತಮ್ಮ ಕೆರಿಯರ್‌ನ ಸುವರ್ಣ ಅವಕಾಶದ ಹೊಸ್ತಿಲಲ್ಲಿದ್ದ ಯುವ ಆಟಗಾರನಿಗೂ ವೈಯಕ್ತಿಕವಾಗಿ ದೊಡ್ಡ ಹಿನ್ನಡೆಯಾಗಲಿದೆ.

ಇದನ್ನೂ ಓದಿ : ಚಿತ್ರರಂಗದ ‘ಹೀ-ಮ್ಯಾನ್’ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ.. ರೋಹಿತ್ ಶರ್ಮಾಗೆ ಪದ್ಮಶ್ರೀ ಗೌರವ!

Tags: CricketKarnataka News beat
SendShareTweet
Previous Post

ಚಿತ್ರರಂಗದ ‘ಹೀ-ಮ್ಯಾನ್’ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ.. ರೋಹಿತ್ ಶರ್ಮಾಗೆ ಪದ್ಮಶ್ರೀ ಗೌರವ!

Next Post

ವಿಶ್ವಕಪ್ ಆಡುವ ಇಚ್ಛೆಯಿತ್ತು, ಆದರೆ ಸರ್ಕಾರದ ಆದೇಶಕ್ಕೆ ತಲೆಬಾಗಲೇಬೇಕಾಯಿತು | ಬಾಂಗ್ಲಾ ಕ್ರಿಕೆಟ್ ಮಂಡಳಿ ಸ್ಪಷ್ಟನೆ!

Related Posts

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!
ಕ್ರೀಡೆ

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು
ಕ್ರೀಡೆ

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

ಮಹಿಳಾ ವಿಶ್ವಕಪ್ ಫೈನಲ್‌ನ ಕೊನೆಯ ಎಸೆತವನ್ನು ನೋಡುವ ಧೈರ್ಯ ನನಗಿರಲಿಲ್ಲ – ಪ್ರತಿಮಾ ರಾವಲ್ ಮನದ ಮಾತು!
ಕ್ರೀಡೆ

ಮಹಿಳಾ ವಿಶ್ವಕಪ್ ಫೈನಲ್‌ನ ಕೊನೆಯ ಎಸೆತವನ್ನು ನೋಡುವ ಧೈರ್ಯ ನನಗಿರಲಿಲ್ಲ – ಪ್ರತಿಮಾ ರಾವಲ್ ಮನದ ಮಾತು!

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?
ಕ್ರೀಡೆ

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

ರೋಹಿತ್ ಶರ್ಮಾ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾದ BCCI
ಕ್ರೀಡೆ

ರೋಹಿತ್ ಶರ್ಮಾ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾದ BCCI

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!
ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಭೀಕರ ನೋ-ಬಾಲ್.. ಅಸದ್ ಅಖ್ತರ್ ಎಸೆತಕ್ಕೆ ಮರುಕಳಿಸಿತು ಕರಾಳ ನೆನಪು!

Next Post
ವಿಶ್ವಕಪ್ ಆಡುವ ಇಚ್ಛೆಯಿತ್ತು, ಆದರೆ ಸರ್ಕಾರದ ಆದೇಶಕ್ಕೆ ತಲೆಬಾಗಲೇಬೇಕಾಯಿತು | ಬಾಂಗ್ಲಾ ಕ್ರಿಕೆಟ್ ಮಂಡಳಿ ಸ್ಪಷ್ಟನೆ!

ವಿಶ್ವಕಪ್ ಆಡುವ ಇಚ್ಛೆಯಿತ್ತು, ಆದರೆ ಸರ್ಕಾರದ ಆದೇಶಕ್ಕೆ ತಲೆಬಾಗಲೇಬೇಕಾಯಿತು | ಬಾಂಗ್ಲಾ ಕ್ರಿಕೆಟ್ ಮಂಡಳಿ ಸ್ಪಷ್ಟನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಮೈಸೂರಿನ ನೂತನ ಡಿಸಿಪಿಯಾಗಿ ಹರ್ಷ ಪ್ರಿಯಂವದ ನೇಮಕ!

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

ಕೂಡಲಸಂಗಮ ಪಂಚಮಸಾಲಿ ಸ್ವಾಮಿಗಳ ವಿರುದ್ಧ ಅವಹೇಳನ ಆರೋಪ – ದೂರು ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ ನೇಮಕಾತಿ. ಎಂಜಿನಿಯರಿಂಗ್ ಮುಗಿಸಿದವರಿಗೆ ಗುಡ್ ನ್ಯೂಸ್!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್ – ಸುಲಿಗೆಗಿಳಿದ ಖಾಸಗಿ ಬಸ್‌‌ ಏಜೆನ್ಸಿಗಳು.. ಟಿಕೆಟ್‌ ದರ ಒನ್‌ ಟು ತ್ರಿಬಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat