ಬೆಂಗಳೂರು: ಇಂದು ವಿಧಾನಸಭಾ ಜಂಟಿ ಅಧಿವೇಶನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜ್ಯಪಾಲರು ಅಧಿವೇಶನ ಆರಂಭಿಸಿ ಆರಂಭಿಕ ಸಾಲನ್ನು ಹೇಳಿ ಸದನದಿಂದ ಹೊರ ನಡೆದಿದ್ದಾರೆ.
ರಾಜ್ಯಪಾಲರು ಹೊರನಡೆಯುತ್ತಿದ್ದಂತೆ ಆಡಳಿತ ಪಕ್ಷದ ಶಾಸಕರು ಭಾರೀ ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಲು ಆರಂಭಿಸಿದರು. ಆಡಳಿತ ಸದಸ್ಯರ ವಿರೋಧದ ನಡುವೆಯೂ ರಾಜ್ಯಪಾಲರು ವಿಧಾನಸೌಧದಿಂದ ಹೊರನಡೆದರು.
ಇದೇ ಮೊದಲ ಬಾರಿಗೆ ರಾಜ್ಯದ ಅಧಿವೇಶನ ಇತಿಹಾಸದಲ್ಲಿ ರಾಜ್ಯಪಾಲರು ಭಾಷಣ ಓದದೇ ತೆರಳಿದ್ದಾರೆ. ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು. ಈ ವೇಳೆ ರಾಜ್ಯಪಾಲರನ್ನು ಬಿ.ಕೆ.ಹರಿಪ್ರಸಾದ್ ಅಡ್ಡಹಾಕಿದರು. ಅವರನ್ನು ಮಾರ್ಷಲ್‌ಗಳು ಪಕ್ಕಕ್ಕೆ ಎಳೆದರು.
ಕೊನೆಯದಾಗಿ, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಮಂತ್ರಿಗಳು ರಾಜ್ಯಪಾಲರನ್ನು ಬೀಳ್ಕೊಟ್ಟರು.
ಇದನ್ನೂ ಓದಿ: ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ | ಲಕ್ಷಾಂತರ ರೂ. ವಸೂಲಿ ಮಾಡಿದ ಮಹಿಳೆ ಅರೆಸ್ಟ್!



















