ಮೈಸೂರು : ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರದ ಕೊಂಬೆ ಬಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಸಿದ್ದನಹುಂಡಿ ಬಳಿ ನಡೆದಿದೆ.
ಮರದ ಕೊಂಬೆ ಬಿದ್ದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಚಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಸಿದ್ದನಹುಂಡಿ ಬಳಿ ತೆರಳುತ್ತಿದ್ದ ಕಬ್ಬಿನ ಲಾರಿಯೊಂದು ರಸ್ತೆಯ ಬದಿಯಲ್ಲಿದ್ದ ಬೃಹತ್ ಮರದ ಕೊಂಬೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮರದ ಕೊಂಬೆ ಮುರಿದು, ಅದೇ ವೇಳೆ ಹಿಂದೆ ಬರುತ್ತಿದ್ದ ಕಾರಿನ ಮೇಲೆ ಬಿದ್ದಿದೆ.
ಕೊಂಬೆ ಬಿದ್ದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ ವಿಷ ಸೇವಿಸಿ ವೃದ್ಧ ದಂಪತಿ ಆತ್ಮಹತ್ಯೆ!



















