ಮೈಸೂರು : ಮೂರು ದಿನಗಳ ಹಿಂದೆ ತಾಯಿ ಹುಲಿ ಸೆರೆ ಹಿಡಿದಿದ್ದ ಅರಣ್ಯ ಇಲಾಖೆ ಅದರ ನಾಲ್ಕು ಮರಿಗಳನ್ನು ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಇಂದು ಸೆರೆ ಹಿಡಿದಿದೆ.
ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಗುರುವಾರ ತಡರಾತ್ರಿ ತಾಯಿ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ನಂತರ ಮರಿ ಹುಲಿಗಳಿಗಾಗಿ ಕಾರ್ಯಾಚರಣೆ ಮುಂದುವರೆಸಲಾಗಿತ್ತು. ಇದೀಗ ಸೆರೆ ಹಿಡಿದಿರುವ ನಾಲ್ಕು ಮರಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗುವುದು ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.
ಜೋಳದ ಹೊಲದಲ್ಲಿ ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದರು. ಈಗ ಮರಿ ಹುಲಿಗಳನ್ನು ಸೆರೆ ಹಿಡಿದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ : ಮರ್ಸಿಡಿಸ್, ಬಿಎಂಡಬ್ಲ್ಯು ಫೀಚರ್ಸ್ ಈಗ ಮಾರುತಿ, ಟಾಟಾದಲ್ಲೂ ಲಭ್ಯ ; ಕೈಗೆಟುಕುವ ದರದಲ್ಲೇ ‘ಲಕ್ಷುರಿ’ ಅನುಭವ!



















