ಗಂಡ ಹೆಂಡತಿಯರ ಜಗಳ ನಾಲ್ಕು ಗೋಡೆಗಳ ಮಧ್ಯೆ ಇರಬೇಕು ಅಂತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಅದು ಹಾದಿ ಬೀದಿ ರಂಪವಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಡಿಯೋವೊಂದು ವೈರಲ್ ಆಗಿದೆ.
ದಂಪತಿಗಳಿಬ್ಬರು ನಡುರಸ್ತೆಯಲ್ಲೇ ಜಗಳಕ್ಕೆ ಇಳಿದಿದ್ದು, ಈ ಜಗಳವು ಅತೀರೇಕಕ್ಕೆ ತಲುಪಿ ಬಡಿದಾಡಿಕೊಂಡಿದ್ದಾರೆ. ಸದ್ಯ ಈ ವೀಡಿಯೋ ಎಲ್ಲೆಡೆ ವೈರಲಾಗುತ್ತಿದ್ದು, ಈ ವಿಡಿಯೋ ಕಂಡು ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ.