ಬೆಂಗಳೂರು: ತಂದೆ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಘಟನೆ ನಗರದ ಅಂದ್ರಹಳ್ಳಿಯ ಮಂಜುನಾಥ ಬಡಾವಣೆಯಲ್ಲಿ ನಡೆದಿದೆ.
ವೆಂಕಟೇಶ್ (65) ಕೊಲೆಯಾದ ಪತಿ. ವೆಂಕಟೇಶ್ ಕಳೆದ 10 ವರ್ಷಗಳ ಹಿಂದೆ ಮೊದಲ ಹೆಂಡತಿಯನ್ನು ಬಿಟ್ಟು, 6 ವರ್ಷಗಳ ಹಿಂದೆ ಪಾರ್ವತಿ ಎಂಬಾಕೆಯನ್ನು ಎರಡನೇ ಮದುವೆಯಾಗಿದ್ದ. ಇತ್ತೀಚೆಗೆ ಪತ್ನಿ ಪಾರ್ವತಿ ಮನೆಯನ್ನು ತನ್ನ ಹೆಸರಿಗೆ ಬರೆಯುವಂತೆ ಅಥವಾ 6 ಲಕ್ಷ ಹಣ ಕೊಡುವಂತೆ ಪತಿಯ ಜೊತೆ ಗಲಾಟೆ ಮಾಡುತ್ತಿದ್ದಳು. ಇದಕ್ಕೆ ಒಪ್ಪದ ವೆಂಕಟೇಶ್ 2.5 ಲಕ್ಷ ರೂ. ನೀಡುವುದಾಗಿ ಹೇಳಿದ್ದಾನೆ.
ನಿನ್ನೆ ಭಾನುವಾರ ಇದೇ ವಿಚಾರವಾಗಿ ಗಂಡ ಹೆಂಡತಿ ನಡುವೆ ಮತ್ತೆ ಜಗಳ ನಡೆದಿದ್ದು, ರಾತ್ರಿ 9 ಗಂಟೆ ವೇಳೆಗೆ ವೆಣಕಟೇಶ್ ಪತ್ನಿ ಪಾರ್ವತಿಯನ್ನು ಮನೆಯಿಂದ ಹೊರಗೆ ಹಾಕಿದ್ದ. ಬಳಿಕ ಪಾರ್ವತಿ ತಂದೆ ರಂಗಸ್ವಾಮಿಗೆ ಕರೆಮಾಡಿ ಮನೆ ಬಳಿ ಕರೆಸಿಕೊಂಡು. ಅಪ್ಪ ಮಗಳು ಇಬ್ಬರು ಸೇರಿ ವೆಂಕಟೇಶ್‌ನನ್ನು ಮೇಲಿಂದ ಕೆಳಗೆ ತಳ್ಳಿದ್ದಾರೆ. ತಲೆಗೆ ಪೆಟ್ಟಾಗಿದ್ದರೂ ಕೂಡ ವೆಂಕಟೇಶ್ ಮೇಲೆ ಹಲ್ಲೆ ಮಾಡಲಾಗಿದ್ದು, ಹಲ್ಲೆಯಿಂದ ತೀವ್ರ ಗಾಯಗೊಂಡ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ತಂದೆ ರಂಗಸ್ವಾಮಿ, ಮಗಳು ಪಾರ್ವತಿಯನ್ನು ಬಂಧಿಸಿದ್ದಾರೆ. ಈ ಘಟನಾ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇದನ್ನೂ ಓದಿ: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ | ICT ಕೋರ್ಟ್ ಮಹತ್ವದ ಆದೇಶ



















