ಬೆಳಗಾವಿ: ಹೆಂಡತಿ ಕಾಟಕ್ಕೆ ಬೇಸತ್ತು ಗಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ.
ತನ್ನದೇ ಕಂಪ್ಯೂಟರ್ ಶಾಪ್ ನಲ್ಲಿ ನೇಣು ಬಿಗಿದುಕೊಂಡು ಸುನೀಲ್ ಮೂಲಿಮನಿ (33) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ತನ್ನ ಸಾವಿಗೆ ಹೆಂಡತಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ನಾಲ್ಕು ವರ್ಷದ ಹಿಂದೆ ಪೂಜಾ ಎಂಬುವವರನ್ನು ಸುನೀಲ್ ಮದುವೆಯಾಗಿದ್ದರು. ಈ ದಂಪತಿಗೆ ಮೂರು ವರ್ಷದ ಮಗು ಕೂಡ ಇದೆ.
ಆದರೆ, ದಂಪತಿ ಮಧ್ಯೆ ಇತ್ತೀಚೆಗೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತ ಸುನೀಲ್, ‘ನನ್ನ ಸಾವಿಗೆ ನನ್ನ ಪತ್ನಿಯೇ ಕಾರಣ’ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಉದ್ಯಮಬಾಗ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.