ಬೆಂಗಳೂರು : ನಗರದ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತಿಯೇ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಮನೋಜ್ ಮತ್ತು ಸ್ವಪ್ನ ಎಂದು ಗುರುತಿಸಲಾಗಿದೆ. ಮೂಲತಃ ಉತ್ತರ ಪ್ರದೇಶದವರಾದ ಈ ದಂಪತಿ ಬೆಂಗಳೂರಿನಲ್ಲಿ ವಾಸವಾಗಿದ್ದು, ಮನೋಜ್ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದನು. ಕತ್ತುಹಿಸುಕಿ ಪತ್ನಿ ಸ್ವಪ್ನಳನ್ನು ಕೊಲೆ ಮಾಡಿದ ಬಳಿಕ ಮನೋಜ್ ಕೂಡ ನೇಣಿಗೆ ಶರಣಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಮಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ – 5 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಇಬ್ಬರ ಬಂಧನ!



















