ಬೆಂಗಳೂರು:ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿಯೇ ಹತ್ಯೆಗೈದಿರುವ ಘಟನೆ ನಗರದ ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ.
ಪಾವಗಡ ಮೂಲದ ಅಂಜಲಿ (20) ಕೊಲೆಯಾದ ಮಹಿಳೆ. ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿ. ಅಂಜಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಆರೋಪಿ ಟ್ರಾವೆಲ್ಸ್ ಕಚೇರಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಅಂಜಲಿ ಸುರಪುರ ಮೂಲದ ರವಿಚಂದ್ರನ ಜೊತೆ 2ನೇ ಮದುವೆಯಾಗಿ, ಅಮೃತಹಳ್ಳಿಯಲ್ಲಿ ವಾಸವಿದ್ದರು. ಮೃತ ಅಂಜಲಿಗೆ ಮತ್ತು ಆರೋಪಿ ರವಿಚಂದ್ರನ್ ಇಬ್ಬರಿಗೂ ಇದು ಎರಡನೇ ಮದುವೆಯಾಗಿತ್ತು. ಖಾಸಗಿ ಕಂಪನಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ರವಿಚಂದ್ರ ಎರಡು ಮೂರು ದಿನಗಳ ಕಾಲ ಮನೆಗೆ ಬರುತ್ತಿರಲಿಲ್ಲ. ಈ ವೇಳೆ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಅಂಜಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಇದನ್ನು ನೋಡಿದ ಆರೋಪಿ ಸಿಟ್ಟಿನಿಂದ ಕೈಯಿಂದ ಗುದ್ದಿ, ಹೊಡೆದು ಸಾಯಿಸಿದ್ದಾನೆ.
ಮೃತ ದೇಹವನ್ನು ಅಂಬೇಡ್ಕರ್ ಕಾಲೇಜಿಗೆ ರವಾನಿಸಲಾಗಿದ್ದು, ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ರವಿಚಂದ್ರನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಗಿಲ್ ನಿಧಾನಗತಿಯ ಆಟ: ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಕಡೆಗಣನೆ ಬಗ್ಗೆ ಪ್ರಶ್ನೆ



















