ಆನೇಕಲ್: ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಪತಿಯೊಬ್ಬ ಪತ್ನಿಯನ್ನು ತಳ್ಳಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಆನೇಕಲ್ (Anekal) ತಾಲೂಕಿನ ಸರ್ಜಾಪುರದ ತಿಗಳ ಚೌಡದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುಳಾ (40) ಹಾಗೂ ಪತಿಯನ್ನು ಮಂಜುನಾಥ್ (45) ಎಂದು ಗುರುತಿಸಲಾಗಿದೆ. ಪತ್ನಿ ಮಾನಸಿಕ ಅಸ್ವಸ್ಥೆಯಾಗಿದ್ದ ಹಿನ್ನೆಲೆಯಲ್ಲಿ ಪತಿ ಮಂಜುನಾಥ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಶನಿವಾರ ರಾತ್ರಿ ಹೆಂಡತಿಯನ್ನು ಭುಜದ ಮೇಲೆ ಎತ್ತಿಕೊಂಡು, ನಿರ್ಮಾಣ ಹಂತದ ಕಟ್ಟಡದ ಎರಡನೇ ಮಹಡಿಗೆ ಕರೆದುಕೊಂಡು ಹೋಗಿದ್ದಾನೆ.
ನಂತರ ಅಲ್ಲಿಂದ ಕೆಳಗೆ ದೂಡಿದ್ದಾನೆ. ಕೆಳಗೆ ಬೀಳುತ್ತಿದ್ದಂತೆ ತಲೆಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಳಗೆ ದೂಡಿರುವ ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.