ಬೆಂಗಳೂರು ಗ್ರಾಮಾಂತರ: ಹೊರವಲಯದ ಆನೇಕಲ್ ತಾಲೂಕಿನ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಬಲಿಯಾಗುವಂತಾಗಿದೆ.
ಮದ್ದೂರಮ್ಮ ದೇವಿ ಜಾತ್ರೆಯ ತೇರು ಧರೆಗೆ ಉರುಳಿದ್ದರಿಂದಾಗಿ ಸಿಲುಕಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಾತ್ರೆಗೆ ಗ್ರಾಮಗಳಿಂದ 150 ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಆಗಮಿಸಿದ್ದವು. ತೇರು ಎಳೆದು ತರುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
ಮದ್ದೂರಮ್ಮ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ. ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ ಮೂಲಕ ಎಳೆದು ತರುವ ಹೆಸರಾಂತ ಜಾತ್ರೆ ಇದಾಗಿದೆ. ಇಲ್ಲಿ ಅತೀ ಎತ್ತರದ ತೇರು ಎಳೆದು ತರುತ್ತಾರೆ. ಇದನ್ನು ನೋಡಲು ಲಕ್ಷಾಂತರ ಭಕ್ತರು ಪ್ರತಿ ವರ್ಷ ಬರುತ್ತಿರುತ್ತಾರೆ. ಆದರೆ, ಈ ವರ್ಷ ಗಾಳಿ ಸಹಿತ ಮಳೆಯಿಂದಾಗಿ ಆಯತಪ್ಪಿ ತೇರು ಬಿದ್ದಿದೆ.
ತೇರಿನಲ್ಲಿ ಇದ್ದ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.