ಬೆಂಗಳೂರು: ಪ್ರವಾಸಿಗರ ಮೇಲೆ ಈ ರೀತಿ ದಾಳಿ ಮಾಡಿರುವುದು ಹೇಡಿತನದ್ದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಈ ಘಟನೆಯನ್ನು ಖಂಡಿಸಿದ್ದಾರೆ. ಹೇಡಿತನದ ದಾಳಿಯನ್ನು ನಾನು ಖಂಡಿಸುತ್ತೇನೆ. ಭಯೋತ್ಪಾದನೆಯ ಎದುರಿಸಲು ಇಡೀ ರಾಷ್ಟ್ರ ಒಗ್ಗಟ್ಟಿನಿಂದ ನಿಂತಿದೆ. ಉಗ್ರರ ದಾಳಿಗಳು ಮಾನವೀಯತೆಗೆ ಕಳಂಕವಾಗಿವೆ. ಈ ಘಟನೆಯಿಂದ ಅಮೂಲ್ಯ ಜೀವಗಳು ಕಳೆದುಹೋಗಿವೆ. ನೊಂದವರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಹೃದಯಪೂರ್ವಕ ಸಂತಾಪ ಸೂಚಿಸುತ್ತೇನೆ ಎಂದು ವಿಷಾದಿಸಿದ್ದಾರೆ.
ಗಾಯಗೊಂಡವರು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಭಾರತದ ರಾಷ್ಟ್ರೀಯ ಭದ್ರತೆಯು ಪ್ರಮುಖ ವಿಷಯವಾಗಿದೆ. ಭದ್ರತೆ ಖಾತ್ರಿಪಡಿಸಲು ಕೇಂದ್ರಸರ್ಕಾರ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸುವೆ” ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.