ಮಂಗಳೂರು: ಕುಮಾರಸ್ವಾಮಿ (HD Kumaraswamy) ಚನ್ನಪಟ್ಟಣ (Channapatna) ನೋಡುವುದಕ್ಕೂ ಮುನ್ನ ನಾನು ನೋಡಿದ್ದೇನೆ. ಕುಮಾರಸ್ವಾಮಿ ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ತಿಳಿದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 1985ರಲ್ಲೇ ಚುನಾವಣೆಗೆ ಸ್ಪರ್ಧಿಸಿದವನು. ಕುಮಾರಸ್ವಾಮಿ 1995ರ ನಂತರ ರಾಜಕೀಯ ಪ್ರವೇಶಿಸಿದ್ದಾರೆ. ದೊಡ್ಡವರು ಅಧಿಕಾರ ಅನುಭವಿಸಿದರೂ ಚನ್ನಪಟ್ಟಣದಲ್ಲಿ ಏನೂ ಅಭಿವೃದ್ಧಿ ಆಗಿಲ್ಲ ಎಂಬ ಭಾವನೆ ಅಲ್ಲಿನ ಜನರಲ್ಲಿದೆ. ಅಲ್ಲಿನ ಜನರಿಗೆ ಅಳಿಲು ಸೇವೆ ಮಾಡೋಣ. ಹಿಂದೆ ಮಂತ್ರಿಯಾಗಿದ್ದಾಗ ಸೇವೆ ಮಾಡಿದ್ದೇನೆ. ಈಗ ಮತ್ತಷ್ಟು ಸೇವೆ ಮಾಡಲು ಮನಸ್ಸು ಮಾಡಿದ್ದೇನೆ ಎಂದು ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ತಮ್ಮ ಡಿ.ಕೆ. ಸುರೇಶ್‌ಗೆ ಆಸಕ್ತಿಯಿಲ್ಲ. ಜನರು ಸುರೇಶ್‌ಗೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೆ ಹೇಳಿದ್ದಾರೆ. ನಮ್ಮನ್ನು ನಂಬಿ ಚನ್ನಪಟ್ಟಣದ ಜನ 85 ಸಾವಿರ ಮತ ನೀಡಿದ್ದಾರೆ. ಜನ ನಮ್ಮನ್ನು ಕೈ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೆಚ್ಚುವರಿ ಡಿಸಿಎಂ ಸ್ಥಾನಗಳ ಬೇಡಿಕೆ ಕುರಿತು ಮಾತನಾಡಿದ ಅವರು, ಈ ರೀತಿ ಸುದ್ದಿಗಳು ಬಿತ್ತರವಾಗುತ್ತಿವೆ. ಆದರೆ, ಇದರಿಂದ ಖುಷಿ ಆಗುವವರಿಗೆ ಆಗಲಿ. ಯಾರು ಏನು ಬೇಕಾದರೂ ಬೇಡಿಕೆ ಇಡಲಿ. ಖುಷಿ ಪಡುವವರಿಗೆ ಬೇಡ ಎಂದು ಹೇಳಲು ಆಗುತ್ತದೆಯೇ? ಯಾರು ಏನು ಬೇಕಾದರೂ ಬೇಡಿಕೆ ಇಡಲಿ. ಪಕ್ಷವು ಯಾಪಕ್ಷವು ಎಲ್ಲರಿಗೂ ಉತ್ತರ ಕೊಡುತ್ತದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.