ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಅವರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಅದನ್ನು ನಾನು ಸ್ವಾಗತಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ವಿಜಯೇಂದ್ರ, ನಾನು ರಾಮುಲು ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾನು ರಾಜ್ಯಾಧ್ಯಕ್ಷನಾಗಿ ಅನುಭವ ಕಡಿಮೆ ಇದೆ ಎಂದು ಅವರು ತಿಳಿಸಿದ್ದಾರೆ. ಅದು ಅವರ ಹೇಳಿಕೆ. ನಾನು ಅದನ್ನು ಸ್ವಾಗತಿಸುತ್ತೇನೆ. ನನಗೆ ರಾಜ್ಯಾಧ್ಯಕ್ಷ ಅನುಭವ ಕಡಿಮೆ ಇರಬಹುದು. ಆದರೆ, ಒಬ್ಬ ಕಾರ್ಯಕರ್ತನಾಗಿ ನಾನು ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಿದ್ದೇನೆ. ಒಬ್ಬ ಕಾರ್ಯಕರ್ತರನಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯದ ಉಪಾಧ್ಯಕ್ಷನಾಗಿ ಕೆಲಸ ಮಾಡಿರುವ ಅನುಭವ ನನಗಿದೆ.
ರಾಜ್ಯಾಧ್ಯಕ್ಷ ಅನ್ನುವುದಕ್ಕಿಂತ ಅನೇಕ ಹುದ್ದೆಗಳನ್ನು ನಿಭಾಯಿಸಿದ್ದೇನೆ. ಹೀಗಾಗಿ ನನಗೆ ಅನುಭವದ ಕೊರೆತ ಇಲ್ಲ ಎಂದಿದ್ದಾರೆ.