ಮೈಸೂರು: ತಮಗೆ ಈಗ 80 ವರ್ಷ ವಯಸ್ಸಾಗಿದ್ದು, ಮುಂದಿನ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ವಯಸ್ಸಾದ ಕಾರಣ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಅವರು ತಿಳಿಸಿದ್ದಾರೆ.
ಇದೇ ವೇಳೆ ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 5ನೇ ಸಾಲಿನಲ್ಲಿ ಕುಳಿತಿದ್ದ ವಿಚಾರಕ್ಕೂ ಅವರು ಪ್ರತಿಕ್ರಿಯಿಸಿದ್ದಾರೆ. ತಾವೇ ಕಾರ್ಯಕ್ರಮಕ್ಕೆ ತಡವಾಗಿ ಹೋಗಿದ್ದರಿಂದ ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳಬೇಕಾಯಿತು ಎಂದು ಸಿದ್ದರಾಮಯ್ಯ ಹೇಳಿದ್ದು, ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿರುವುದಾಗಿ ಮೈಸೂರಿನಲ್ಲಿ ತಿಳಿಸಿದ್ದಾರೆ.
















