ಕೊಪ್ಪಳ: ಅಲೆಮಾರಿ ಸಮುದಾಯಕ್ಕೆ ಶೇ. 1ರಷ್ಟು ಮೀಸಲಾತಿ ಮಾಡಿಸಿ ಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಭರವಸೆ ನೀಡಿದ್ದಾರೆ.
ಕೊಪ್ಪಳದ ಕುಕನೂರು ಪಟ್ಟಣಕ್ಕೆ ಬಸವರಾಜ ರಾಯರೆಡ್ಡಿ ಅವರು ಕಾರ್ಯಕ್ರಮಕ್ಕೆಂದು ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅಲೆಮಾರಿ ಸಮುದಾಯದವರು ರಾಯರೆಡ್ಡಿ ಅವರನ್ನು ಭೇಟಿ ಮಾಡಿ , ಶೇ.1ರಷ್ಟು ಮೀಸಲಾತಿಗಾಗಿ ಅಲೆಮಾರಿ ಸಮುದಾಯದವರು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದೇವೆ. ಜೊತೆಗೆ ಮೀಸಲಾತಿಗಾಗಿ ಬೆಂಗಳೂರಿಗೆ ಹೋಗುತ್ತೇವೆ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ರಾಯರೆಡ್ಡಿ, ನಿಮಗೆ ಶೇ. 1ರಷ್ಟು ಮೀಸಲಾತಿ ಮಾಡಿಸಿ ಕೊಡುತ್ತೇನೆ ಎಂದು ತಿಳಿಸಿದ್ದಾರೆ.