ಬೆಂಗಳೂರು : ದೇಶದ ವಾಯುಪಡೆಯಲ್ಲಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ 6 (IAF Recruitment 2026) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 6 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಾಯುಪಡೆ
ಒಟ್ಟು ಹುದ್ದೆಗಳು: 6
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 26
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿದವರಿಗೆ ಒಳ್ಳೆಯ ಅವಕಾಶವಿದೆ. ಕನಿಷ್ಠ 18ರಿಂದ 25 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಪಾವತಿಸಬೇಕಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು ಮೊದಲಿಗೆ indianairforce.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ The Commandant, IAM, IAF, Vimanapura PO Bangalore-560017 ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಇದನ್ನೂ ಓದಿ : ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!



















