ಬೆಂಗಳೂರು : ದೇಶದ ವಾಯುಪಡೆಯಲ್ಲಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹಿಂದಿ ಟೈಪಿಸ್ಟ್ ಸೇರಿ 47 (IAF Recruitment 2026) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಾಯುಪಡೆ
ಒಟ್ಟು ಹುದ್ದೆಗಳು: 47
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 1
34 ಲೋವರ್ ಡಿವಿಷನ್ ಕ್ಲರ್ಕ್, 10 ಹಿಂದಿ ಟೈಪಿಸ್ಟ್ ಹಾಗೂ 3 ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಮುಗಿಸಿದವರಿಗೆ ಒಳ್ಳೆಯ ಅವಕಾಶವಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 18ರಿಂದ 25 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು.
ನೇಮಕಾತಿ ಹೊಂದಿದವರಿಗೆ ಮಾಸಿಕ 19,900 ರೂಪಾಯಿಂದ 63,200 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ದೈಹಿಕ ಸಾಮರ್ಥ್ಯ, ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು agnipathvayu.cdac.inವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಇದನ್ನೂ ಓದಿ : ಗಾಂಜಾ ಸೇವಿಸದಿದ್ರೂ ಕೇಸ್ ; ಧಾರವಾಡದಲ್ಲಿ ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ?



















