ಬೆಂಗಳೂರು : ದೇಶದ ವಾಯುಪಡೆಯಲ್ಲಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ವಿವಿಧ ಮ್ಯೂಸಿಶಿಯನ್ 47 (IAF Recruitment 2026) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಾಯುಪಡೆ
ಒಟ್ಟು ಹುದ್ದೆಗಳು: ವಿವಿಧ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 2
ಮಾನ್ಯತೆ ಪಡೆದ ಯಾವುದೇ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರು ಎಂದು ತಿಳಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 18 ತುಂಬಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ 100 ರೂಪಾಯಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿಂದ 40 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಮ್ಯೂಸಿಕ್ ಪ್ರೊಫಿಶಿಯೆನ್ಸ್ ಟೆಸ್ಟ್ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು iafrecruitment.edcil.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ : ನಿವೃತ್ತಿ ಊಹಾಪೋಹಗಳ ನಡುವೆಯೂ ರೋಹಿತ್‌ಗೆ ಲಾಲ್‌ಚಂದ್ ರಾಜ್‌ಪುತ್ ಬೆಂಬಲ!


















