ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆ ಹಿಡಿಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ದೇಶದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ಯುರಿಟಿ ಅಸಿಸ್ಟಂಟ್ (ಮೋಟಾರು ಸಾರಿಗೆ) ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 455 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 28 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಟೆಲಿಜೆನ್ಸ್ ಬ್ಯೂರೋ
ಒಟ್ಟು ಹುದ್ದೆಗಳು: 455
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಸೆಕ್ಯುರಿಟಿ ಅಸಿಸ್ಟಂಟ್ (ಮೋಟಾರು ಸಾರಿಗೆ)
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 28
ಕನಿಷ್ಠ 18ರಿಂದ 27 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 69,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತಿದೆ. ದೇಶದ ಹಲವು ಭಾಗಗಳಲ್ಲಿ ನೇಮಕಾತಿ ನಡೆಯುತ್ತಿದೆ. ಬೆಂಗಳೂರಿನಲ್ಲಿ 6 ಹುದ್ದೆಗಳು ಖಾಲಿ ಇವೆ. ಜನರಲ್, ಇಡಬ್ಲ್ಯೂಎಸ್ ಹಾಗೂ ಒಬಿಸಿಯವರಿಗೆ 650 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 550 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರು mha.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಲು ಅರ್ಹತೆಗಳು
- ಮಾನ್ಯತೆ ಪಡೆದ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು
- ವಾಹನ ಚಾಲನಾ ಪರವಾನಗಿ ಇರಬೇಕು
- ಮೋಟಾರ್ ಮೆಕ್ಯಾನಿಸಂನಲ್ಲಿ ಪರಿಣತಿ ಹೊಂದಿರಬೇಕು
- ವಾಹನ ಚಾಲನೆಯಲ್ಲಿ ಕನಿಷ್ಠ 1 ವರ್ಷ ಅನುಭವ ಇರಬೇಕು