ಬೆಂಗಳೂರು: ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 10,277 ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ದೇಶಾದ್ಯಂತ ಸಾವಿರಾರು ಉದ್ಯೋಗಾವಕಾಶಗಳು ಲಭಿಸುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂದು ಬಯಸುವವರಿಗೆ ಒಳ್ಳೆಯ ಅವಕಾಶವಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಗಸ್ಟ್ 1ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 21 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಅಲ್ಲದೆ, ಕಂಪ್ಯೂಟರ್ ಜ್ಞಾನ ಮತ್ತು ಸ್ಥಳೀಯ ಭಾಷೆಯಲ್ಲಿ ಪರಿಣತಿಯನ್ನು ಹೊಂದಿರಬೇಕು ಎಂದು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 20 ಹಾಗೂ ಗರಿಷ್ಠ 30 ವರ್ಷದ ವಯೋಮಿತಿಯನ್ನು ಐಬಿಪಿಎಸ್ ನಿಗದಿಪಡಿಸಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಐಬಿಪಿಎಸ್
ಹುದ್ದೆಗಳ ಹೆಸರು: ಕ್ಲರ್ಕ್
ಒಟ್ಟು ಹುದ್ದೆಗಳು: 10,277
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 21
ಕರ್ನಾಟಕದಲ್ಲಿ 1,170 ಹುದ್ದೆ ಖಾಲಿ
ದೇಶದ ಹಲವು ರಾಜ್ಯಗಳಲ್ಲಿ ನೇಮಕಾತಿ ನಡೆಯುತ್ತಿದ್ದು, ಕರ್ನಾಟಕದಲ್ಲಿಯೇ 1,170 ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ibps.in. ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 24,050 ರೂಪಾಯಿಯಿಂದ 64,480 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆನ್ ಲೈನ್ ಮೂಲಕ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಪಿಡಿ ಅಭ್ಯರ್ಥಿಗಳಿಗೆ 175 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಜನರಲ್, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 850 ರೂಪಾಯಿ ಅರ್ಜಿ ಶುಲ್ಕವಿದೆ.